
ನವದೆಹಲಿ, 22 ಮಾರ್ಚ್ (ಹಿ.ಸ.):
ಆ್ಯಂಕರ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ವಿಶ್ವ ಜಲ ದಿನದ ಅಂಗವಾಗಿ ಜಲ ಸಂರಕ್ಷಣೆಯ ಮಹತ್ವವನ್ನು ಒತ್ತಿಹೇಳಿದರು.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪ್ರತಿ ಹನಿ ನೀರನ್ನು ಉಳಿಸುವ ಮತ್ತು ಅದನ್ನು ಜವಾಬ್ದಾರಿಯುತವಾಗಿ ಬಳಸುವ ಬದ್ಧತೆಯನ್ನು ಪುನರುಚ್ಚರಿಸಲು ಕರೆ ನೀಡಿದರು. “ನೀರು ನಮ್ಮ ಜೀವನವನ್ನು ಉಳಿಸುತ್ತದೆ ಮತ್ತು ನಮ್ಮ ಭೂಮಿಯ ಭವಿಷ್ಯವನ್ನು ರೂಪಿಸುತ್ತದೆ. ಆದ್ದರಿಂದ, ನೀರನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ” ಎಂದು ಅವರು ಹೇಳಿದರು.
ಇದೇ ವೇಳೆ, ಸುಸ್ಥಿರ ಅಭಿವೃದ್ಧಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವವರನ್ನು, ಜಲ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವವರನ್ನು ಪ್ರಧಾನಿ ಶ್ಲಾಘಿಸಿದರು. ಜಲ ಸಂಪನ್ಮೂಲಗಳ ಸಂರಕ್ಷಣೆ ಮೂಲಕ ಭವಿಷ್ಯದ ಪೀಳಿಗೆಗೆ ಸುರಕ್ಷಿತ ಪರಿಸರ ನಿರ್ಮಾಣ ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa