ಧಾರವಾಡದಲ್ಲಿ ಎಸ್ಸಿ/ಎಸ್ಟಿ ಮುಖಂಡರ ಕುಂದುಕೊರತೆ ಸಭೆ
ಧಾರವಾಡ, 22 ಮಾರ್ಚ್ (ಹಿ.ಸ.): ಆ್ಯಂಕರ್: ಧಾರವಾಡ ಪೊಲೀಸ್ ಹೆಡ್ ಕ್ವಾಟರ್ಸ್‌ನ ದುರ್ಗಾದೇವಿ ದೇವಾಲಯದ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಸಮುದಾಯದ ವಿವಿಧ ಸಮಸ್ಯೆಗಳು, ಕಲ್ಯಾಣ ಯೋಜನೆಗಳ ಅನುಷ್ಠಾನ,
Meeting


ಧಾರವಾಡ, 22 ಮಾರ್ಚ್ (ಹಿ.ಸ.):

ಆ್ಯಂಕರ್:

ಧಾರವಾಡ ಪೊಲೀಸ್ ಹೆಡ್ ಕ್ವಾಟರ್ಸ್‌ನ ದುರ್ಗಾದೇವಿ ದೇವಾಲಯದ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಯಿತು.

ಸಭೆಯಲ್ಲಿ ಸಮುದಾಯದ ವಿವಿಧ ಸಮಸ್ಯೆಗಳು, ಕಲ್ಯಾಣ ಯೋಜನೆಗಳ ಅನುಷ್ಠಾನ, ಹಾಗೂ ಕಾನೂನು-ಸುವ್ಯವಸ್ಥೆ ಸಂಬಂಧಿತ ವಿಷಯಗಳ ಕುರಿತು ಚರ್ಚೆ ನಡೆಯಿತು. ಮುಖಂಡರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

ಅಧಿಕಾರಿಗಳು ಸಮಸ್ಯೆಗಳನ್ನು ಆಲಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande