ಮಹನೀಯರ ಸಾರ್ಥಕ ಜೀವನದ ಅರ್ಥಪೂರ್ಣ ಜನ್ಮದಿನಾಚರಣೆ : ಡಾ. ಸುರೇಶ ಬಿ.ಇಟ್ನಾಳ
ಕೊಪ್ಪಳ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಏಪ್ರಿಲ್ ನಲ್ಲಿ ಆಚರಿಸಲಾಗುವ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಸಾರ್ಥಕ ಜೀವನದ ಬಗ್ಗೆ ಜನರಿಗೆ ತಿಳಿಯುವಂತೆ ಎಲ್ಇಡಿ ಸ್ಕ್ರೀನ್ಗಳ ಮೂಲಕ ಜೀವನ ಚರಿತ್ರೆ ಪರಿಚಯಿಸಿ, ಅರ್ಥಪೂರ್ಣವಾಗಿ ಜಯಂತಿ ಆಚರಣೆಗೆ ಸ
ಮಹನೀಯರ ಸಾರ್ಥಕ ಜೀವನದ ಅರ್ಥಪೂರ್ಣ ಜನ್ಮದಿನಾಚರಣೆ : ಡಾ. ಸುರೇಶ ಬಿ.ಇಟ್ನಾಳ


ಮಹನೀಯರ ಸಾರ್ಥಕ ಜೀವನದ ಅರ್ಥಪೂರ್ಣ ಜನ್ಮದಿನಾಚರಣೆ : ಡಾ. ಸುರೇಶ ಬಿ.ಇಟ್ನಾಳ


ಮಹನೀಯರ ಸಾರ್ಥಕ ಜೀವನದ ಅರ್ಥಪೂರ್ಣ ಜನ್ಮದಿನಾಚರಣೆ : ಡಾ. ಸುರೇಶ ಬಿ.ಇಟ್ನಾಳ


ಕೊಪ್ಪಳ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಏಪ್ರಿಲ್ ನಲ್ಲಿ ಆಚರಿಸಲಾಗುವ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಸಾರ್ಥಕ ಜೀವನದ ಬಗ್ಗೆ ಜನರಿಗೆ ತಿಳಿಯುವಂತೆ ಎಲ್ಇಡಿ ಸ್ಕ್ರೀನ್ಗಳ ಮೂಲಕ ಜೀವನ ಚರಿತ್ರೆ ಪರಿಚಯಿಸಿ, ಅರ್ಥಪೂರ್ಣವಾಗಿ ಜಯಂತಿ ಆಚರಣೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಹೇಳಿದರು.

ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಏಪ್ರಿಲ್ 5 ರಂದು ಆಚರಿಸಲಾಗುವ ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆ ಹಾಗೂ ಏಪ್ರಿಲ್ 14 ರಂದು ಆಚರಿಸಲಾಗುವ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಚರ್ಚಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏ.5 ರಂದು ಜಿಲ್ಲಾ ಕೇಂದ್ರದಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮದಿನಾಚರಣೆಯನ್ನು ಹಾಗೂ ಏಪ್ರಿಲ್ 14 ರಂದು ಆಚರಿಸಲಾಗುವ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು. ನಿಗದಿತ ದಿನಾಂಕಗಳಂದು ಬೆಳಿಗ್ಗೆ 8.30 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮಹನೀಯರ ಭಾವಚಿತ್ರದ ಮೆರವಣಿಗೆ ಆರಂಭವಾಗಿ, ಗಡಿಯಾರ ಕಂಬ ಮಾರ್ಗವಾಗಿ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ಮೆರವಣಿಗೆ ನಡೆಯಲಿದೆ. ಸಾಹಿತ್ಯ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಶಿಷ್ಠಾಚಾರದಂತೆ ವೇದಿಕೆ ಕಾರ್ಯಕ್ರಮ ಆಯೋಜನೆ ಮಾಡಬೇಕು. ಸಮುದಾಯದ ಸಾಧಕರಿಗೆ ಸನ್ಮಾನಿಸಬೇಕು. ಮಹನೀಯರ ಜೀವನ ಚರಿತ್ರೆಯ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸಲು ವಿಶೇಷ ಉಪನ್ಯಾಸ ಆಯೋಜಿಸಬೇಕು. ಮಹನೀಯರಿಗೆ ಸಂಬಂಧಿಸಿದ ಪುಸ್ತಕಗಳನ್ನು ವಿತರಿಸಬೇಕು ಎಂದು ಅವರು ಹೇಳಿದರು.

ನಿಗದಿತ ದಿನಾಂಕಗಳಂದು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಮಹನೀಯರ ಜಯಂತಿಗಳನ್ನು ಆಚರಿಸಬೇಕು. ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸಬೇಕು. ಮೆರವಣಿಗೆಯಲ್ಲಿ ಮಹನೀಯರ ಜೀವನದ ಸಾರ ಬಿಂಬಿಸುವ ಮಾಹಿತಿಯನ್ನು ಪ್ರಚುರ ಪಡಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಕಾರ್ಯಕ್ರಮಗಳ ದಿನದಂದು ಮೆರವಣಿಗೆ ನಡೆಯುವ ರಸ್ತೆ, ಪ್ರಮುಖ ವೃತ್ತಗಳು, ವೇದಿಕೆ ಕಾರ್ಯಕ್ರಮದ ಸಭಾಂಗಣದ ಸ್ವಚ್ಛತೆ ಮಾಡಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಬೇಕು. ಉಪಹಾರದ ವ್ಯವಸ್ಥೆ ಕಲ್ಪಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಒದಗಿಸಬೇಕು. ಯಾವುದೇ ಗೊಂದಲ, ಅಡಚಣೆ ಉಂಟಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಟಿ., ಸಹಾಯಕ ಆಯುಕ್ತರಾದ ಕ್ಯಾ.ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗವೇಣಿ, ನಗರಸಭೆ ಪೌರಾಯುಕ್ತ ವೆಂಕಟೇಶ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿ ಪುಷ್ಪಲತಾ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರಾದ ವೆಂಕಟೇಶ ಹಾಲವರ್ತಿ, ಪಾಳೆಪ್ಪ ಎಚ್.ಪೂಜಾರ, ಸಿದ್ದರಾಮ ಹೊಸಮನಿ, ಶಾಂತಕುಮಾರ, ರಾಘು ಡಿ.ಚಾಕರಿ, ಚಂದ್ರುಸ್ವಾಮಿ ಹೊಸಮನಿ, ದ್ಯಾಮಣ್ಣ ಪೂಜಾರ, ರಾಮಣ್ಣ ಚೌಡ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande