
ದಾವಣಗೆರೆ, 23 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು.
ಮೆರವಣಿಗೆಗೂ ಮುನ್ನವೇ ಪತ್ನಿ ಹಾಗೂ ಬಿಜೆಪಿ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಬಳಿಕ, ದುರ್ಗಾಂಬಿಕಾ ದೇವಸ್ಥಾನದಿಂದ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದರು.
ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಶ್ರೀನಿವಾಸ್ ದಾಸ್ ಕರಿಯಪ್ಪ, “ಈ ಬಾರಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬದಲಾವಣೆ ಖಚಿತ. ಹಮಾಲಿಯೊಬ್ಬರ ಮಗ ವಿಧಾನಸಭೆಗೆ ಪ್ರವೇಶಿಸುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa