
ಬಾಗಲಕೋಟೆ, 23 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವೀರಣ್ಣ ಚರಂತಿಮಠ ಅವರು ನಾಮಪತ್ರ ಸಲ್ಲಿಕೆಗೆ ಮುನ್ನ ಮುಚಖಂಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಚುನಾವಣಾ ಪ್ರಚಾರ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಗಳ ಮೊದಲು ದೇವರ ಆಶೀರ್ವಾದ ಪಡೆಯುವ ಉದ್ದೇಶದಿಂದ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.
ನಂತರ ಅವರು ನಾಮಪತ್ರ ಸಲ್ಲಿಕೆಗಾಗಿ ತಹಶೀಲ್ದಾರ್ ಕಚೇರಿಯತ್ತ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande