ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ: ಪ್ರಲ್ಹಾದ ಜೋಶಿ, ವಿಜಯೇಂದ್ರ ಭಾಗಿ
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ, ಮಾಜಿ ಸಿಎಮ್ ಜಗದೀಶ ಶ
ನಾಮಪತ್ರ


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ, ಮಾಜಿ ಸಿಎಮ್ ಜಗದೀಶ ಶೆಟ್ಟರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಪಕ್ಷದ ಮುಖಂಡರು ಮತ್ತು ಬೆಂಬಲಿಗರ ಉಪಸ್ಥಿತಿಯಲ್ಲಿ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಕಾರ್ಯಕ್ರಮದ ವೇಳೆ ಪಕ್ಷದ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande