ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ನಾಮಪತ್ರ ಸಲ್ಲಿಕೆ
ಬಾಗಲಕೋಟೆ, 23 ಮಾರ್ಚ್ (ಹಿ.ಸ.): ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ ಮೇಟಿ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ನಗರದ ತಹಶೀಲ್ದಾರ ಕಚೇರಿಗೆ ಆಗಮಿಸಿದ ಉಮೇಶ ಮೇಟಿ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು
ನಾಮಪತ್ರ


ಬಾಗಲಕೋಟೆ, 23 ಮಾರ್ಚ್ (ಹಿ.ಸ.):

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ ಮೇಟಿ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.

ನಗರದ ತಹಶೀಲ್ದಾರ ಕಚೇರಿಗೆ ಆಗಮಿಸಿದ ಉಮೇಶ ಮೇಟಿ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್ ಜಿ ನಂಜಯ್ಯಮಠ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಯ ಮೊದಲು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಮೆರವಣಿಗೆ ನಡೆಸಿದರು. ಪಕ್ಷದ ಧ್ವಜಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಾಯಕರು, ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪರ ಜನಾಭಿಪ್ರಾಯ ಉತ್ತಮವಾಗಿದ್ದು, ಉಪ ಚುನಾವಣೆಯಲ್ಲಿ ಉಮೇಶ ಮೇಟಿ ಅವರು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಅಭ್ಯರ್ಥಿಗೆ ಶುಭ ಹಾರೈಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande