
ಬಾಗಲಕೋಟೆ, 23 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬಾಗಲಕೋಟೆ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಪ್ರಮುಖ ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ವಾಹನಗಳ ಸಮಗ್ರ ತಪಾಸಣೆ ನಡೆಸಲಾಗುತ್ತಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಯುವ ಉದ್ದೇಶದಿಂದ ವಾಹನಗಳಲ್ಲಿ ಸಾಗಿಸಲಾಗುತ್ತಿರುವ ನಗದು, ಮದ್ಯ ಹಾಗೂ ಇತರ ವಸ್ತುಗಳ ಬಗ್ಗೆ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಬಳಿ ಅಗತ್ಯ ದಾಖಲೆಗಳನ್ನು ಹೊಂದಿರುವಂತೆ ಹಾಗೂ ವಾಹನ ತಪಾಸಣೆ ವೇಳೆ ಪೊಲೀಸರೊಂದಿಗೆ ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande