ಬಾಗಲಕೋಟೆ ಉಪಚುನಾವಣೆ: ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ, ಸಿಎಂ ಸಿದ್ದರಾಮಯ್ಯ ಭಾಗಿ
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿದ್ದು ಅಭ್ಯರ್ಥಿಗೆ ಶುಭ ಕೋರಿದರು. ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ
ಸಿಮರ


ಸಿದ್ದಣ್ಣಾ


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿದ್ದು ಅಭ್ಯರ್ಥಿಗೆ ಶುಭ ಕೋರಿದರು.

ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಸಚಿವರಾದ ಸತೀಶ್ ಜಾರಕಿಹೋಳಿ, ಎಂ ಬಿ ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಸೇರಿದಂತೆ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದರು.

ನಾಮಪತ್ರ ಸಲ್ಲಿಕೆಯ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಇದೇ ವೇಳೆ ಅಭ್ಯರ್ಥಿ ಉಮೇಶ್ ಮೇಟಿ ಅವರು ಈ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande