ಬಾಗಲಕೋಟೆ ಉಪಚುನಾವಣೆ: ನಾಮಪತ್ರ ಸಲ್ಲಿಕೆ ವೇಳೆ ದಿ. ಹೆಚ್.ವೈ. ಮೇಟಿ ಮಕ್ಕಳ ಭಾವುಕ ಕ್ಷಣ
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ವೇಳೆ ಭಾವುಕ ಕ್ಷಣಗಳು ಕಂಡು ಬಂದವು. ಕಾರ್ಯಕ್ರಮದ ವೇದಿಕೆಯಲ್ಲಿ ದಿವಂಗತ ಮಾಜಿ ಸಚಿವ ಹೆಚ್ ವೈ ಮೇಟಿ ಅವರ ಮಕ್ಕಳು ಬಿಕ್ಕ
ಮೆಟಿ


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ವೇಳೆ ಭಾವುಕ ಕ್ಷಣಗಳು ಕಂಡು ಬಂದವು.

ಕಾರ್ಯಕ್ರಮದ ವೇದಿಕೆಯಲ್ಲಿ ದಿವಂಗತ ಮಾಜಿ ಸಚಿವ ಹೆಚ್ ವೈ ಮೇಟಿ ಅವರ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತ ಘಟನೆ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕಣ್ಣೀರು ಹಾಕುತ್ತಾ ನಮಗೆ ಬೆಂಬಲಿಸಿ ನಮ್ಮ ತಂದೆಯ ಆಶಯ ಈಡೇರಿಸಿ ಎಂದು ಭಾವುಕರಾಗಿಯೇ ಮನವಿ ಮಾಡಿದ್ದು ಎಲ್ಲರ ಗಮನ ಸೆಳೆಯಿತು.

ತಂದೆಯ ನೆನಪಿನಲ್ಲಿ ಭಾವುಕರಾದ ಮಕ್ಕಳು ಕಣ್ಣೀರಿಟ್ಟ ದೃಶ್ಯ ಕಂಡುಬಂದಿದ್ದು, ವೇದಿಕೆಯಲ್ಲಿ ಇದ್ದ ನಾಯಕರು ಹಾಗೂ ಕಾರ್ಯಕರ್ತರು ಅವರನ್ನು ಸಮಾಧಾನಪಡಿಸಿದರು.

ದಿವಂಗತ ಹೆಚ್.ವೈ. ಮೇಟಿ ಅವರ ಅಕಾಲಿಕ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರಕ್ಕೆ ಅವರ ಪುತ್ರ ಉಮೇಶ್ ಮೇಟಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಪಕ್ಷದ ಹಲವು ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande