ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಗೆಲುವು ಖಚಿತ: ಪ್ರಹ್ಲಾದ್ ಜೋಶಿ
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ಮಮತಾ ಮನೆಗೆ ಹೋಗಲಿದ್ದು, ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ತಮಿಳುನಾಡಿನಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಲಿದ್ದು, ಕರ್ನಾಟಕದ ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರ
ಜೊಸಿ


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ಮಮತಾ ಮನೆಗೆ ಹೋಗಲಿದ್ದು, ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ತಮಿಳುನಾಡಿನಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಲಿದ್ದು, ಕರ್ನಾಟಕದ ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಆಯೋಜಿಸಿದ್ದ ರೋಡ್ ಶೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬೃಹತ್ ಮೆರವಣಿಗೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳದಲ್ಲಿ ಹಾಗೂ ಅಸ್ಸಾಂನಲ್ಲಿ ಮೂಲಭೂತವಾದಿಗಳ ಆಟ ಬಂದ್ ಆಗಲಿದೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲೂ ತುಷ್ಟೀಕರಣ ರಾಜಕಾರಣ ಸಂಪೂರ್ಣವಾಗಿ ನಿಲ್ಲಬೇಕು. ಆ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕೆಂದು ಕರೆ ನೀಡಿದರು.

ಚುನಾವಣೆಯಲ್ಲಿ ಬಿಜೆಪಿ ಪರ ಅಲೆ ಸ್ಪಷ್ಟವಾಗಿ ಕಾಣುತ್ತಿದ್ದು, ಜನರ ಪ್ರೀತಿ ಹಾಗೂ ಬೆಂಬಲ ಪಕ್ಷಕ್ಕೆ ದೊಡ್ಡ ಶಕ್ತಿ ನೀಡಲಿದೆ. ಪ್ರಧಾನಿ ಅವರ ಜನಪರ ಯೋಜನೆಗಳು ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಗೆಲುವಿಗೆ ಕಾರಣವಾಗಲಿವೆ ಎಂದು ಅವರು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande