
ಬಾಗಲಕೋಟೆ, 23 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಆಗಮಿಸುವಂತೆ ಬಿಜೆಪಿ ಕಾರ್ಯಕರ್ತರು ಡಂಗುರ ಹೊಡೆಸುವ ಮೂಲಕ ಬಿಜೆಪಿ ಪಕ್ಷದ ಮುಖಂಡರು ಸಾರ್ವಜನಿಕರಿಗೆ ಆಹ್ವಾನ ನೀಡಿದರು.
ನಗರದ ವಿವಿಧ ಪ್ರದೇಶಗಳಲ್ಲಿ ಡಂಗುರ ಹೊಡೆಸಿ, ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಯಿತು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಿದ್ಧತೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande