
ಬಾಗಲಕೋಟೆ, 23 ಮಾರ್ಚ್ (ಹಿ.ಸ.)
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆಗೆ ಆಗಮಿಸುವ ಹಿನ್ನೆಲೆ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲಾಗಿದೆ.
ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ದಿವಂಗತ ಹೆಚ್ ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರದ ವಿದ್ಯಾಗಿರಿಯ ಇಂಜಿನಿಯರಿಂಗ್ ಕಾಲೇಜ್ ಸರ್ಕಲ್ ಬಳಿ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.
ಬೃಹತ್ ಮೆರವಣಿಗೆ ಮೂಲಕ
ನಾಮಪತ್ರ ನಡೆಯುವ ಮಾರ್ಗಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ, ವಾಹನ ಸಂಚಾರ ವ್ಯವಸ್ಥೆ ಸೇರಿದಂತೆ ವಿವಿಧ ಭದ್ರತಾ ಕ್ರಮಗಳನ್ನು ಅಧಿಕಾರಿಗಳು ಪರಿಶೀಲಿಸಿದರು.
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಪಾಸಣೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande