ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುತ್ತಿದೆ: ಪ್ರಹ್ಲಾದ್ ಜೋಶಿ ವಾಗ್ದಾಳಿ
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಇರಾನ್–ಇಸ್ರೇಲ್/ಅಮೆರಿಕಾ ನಡುವಿನ ಯುದ್ಧದ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ಬಾಗ
ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುತ್ತಿದೆ: ಪ್ರಹ್ಲಾದ್ ಜೋಶಿ ವಾಗ್ದಾಳಿ


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಇರಾನ್–ಇಸ್ರೇಲ್/ಅಮೆರಿಕಾ ನಡುವಿನ ಯುದ್ಧದ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.

ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಎಲ್ಲ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ದೇಶದ ಭದ್ರತೆ ಮತ್ತು ಜನರ ಹಿತಾಸಕ್ತಿಯ ಬಗ್ಗೆ ಪ್ರಧಾನಿ ಮೋದಿ ಸದಾ ಕಾಳಜಿ ವಹಿಸುತ್ತಾರೆ ಎಂದು ಹೇಳಿದರು.

ಆದರೆ ಕಾಂಗ್ರೆಸ್ ಪಕ್ಷದ ನಾಯಕರು ಜನರಲ್ಲಿ ಗೊಂದಲ ಉಂಟು ಮಾಡುವ ಉದ್ದೇಶದಿಂದ ಇರಾನ್–ಇಸ್ರೇಲ್/ಅಮೆರಿಕಾ ಯುದ್ಧದ ಬಗ್ಗೆ ತಪ್ಪು ಮಾಹಿತಿಯನ್ನು ಹಬ್ಬಿಸುತ್ತಿದ್ದಾರೆ.

ಇದರಿಂದ ದೇಶದ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande