ಛಲವೊಂದಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು, 23 ಮಾರ್ಚ್ (ಹಿ.ಸ.): ಆ್ಯಂಕರ್: ಛಲವೊಂದಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಡ್ಯದ ಓಟಗಾರ್ತಿ ವಿಜಯಕುಮಾರಿ ಜಿ.ಕೆ. ಅವರು ಕೇರಳದ ತಿರುವನಂತಪುರಂನಲ್ಲಿ ನಡೆದ ‘7ನೇ ಇಂಡಿಯನ್ ಓಪನ್ 400 ಮೀಟರ್ ಓಟದ ಸ್ಪರ್ಧೆ’ಯಲ್ಲಿ ಅಮೋಘ
Dks


ಬೆಂಗಳೂರು, 23 ಮಾರ್ಚ್ (ಹಿ.ಸ.):

ಆ್ಯಂಕರ್:

ಛಲವೊಂದಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಂಡ್ಯದ ಓಟಗಾರ್ತಿ ವಿಜಯಕುಮಾರಿ ಜಿ.ಕೆ. ಅವರು ಕೇರಳದ ತಿರುವನಂತಪುರಂನಲ್ಲಿ ನಡೆದ ‘7ನೇ ಇಂಡಿಯನ್ ಓಪನ್ 400 ಮೀಟರ್ ಓಟದ ಸ್ಪರ್ಧೆ’ಯಲ್ಲಿ ಅಮೋಘ ಸಾಧನೆಗೈದು ಬೆಳ್ಳಿ ಪದಕ ಗೆದ್ದಿರುವ ಹಿನ್ನೆಲೆಯಲ್ಲಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

“ವಿಜಯಕುಮಾರಿ ಅವರ ಈ ಸಾಧನೆ ರಾಜ್ಯಕ್ಕೆ ಹೆಮ್ಮೆ ತಂದಿದೆ. ಅವರ ಪರಿಶ್ರಮ ಮತ್ತು ದೃಢಸಂಕಲ್ಪ ಎಲ್ಲರಿಗೂ ಪ್ರೇರಣೆ. ಮುಂಬರುವ ಎಲ್ಲಾ ಕ್ರೀಡಾಕೂಟಗಳಲ್ಲಿ ಅವರು ಇನ್ನಷ್ಟು ಯಶಸ್ಸು ಸಾಧಿಸಲಿ” ಎಂದು ಶುಭ ಹಾರೈಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande