ಸಾವಿರಾರು ಕಾರ್ಯಕರ್ತರ ಜಯಘೋಷದೊಂದಿಗೆ ಬೃಹತ್ ರೋಡ್ ಶೋ.
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಸಾವಿರಾರು ಕಾರ್ಯಕರ್ತರ ಜಯಘೋಷದೊಂದಿಗೆ ನಡೆದ ಬೃಹತ್ ರೋಡ್ ಶೋ ಮೆರವಣಿಗೆಯ ನಡುವೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರು ನಾಮಪತ್ರ ಸಲ್ಲಿಸಿದರು ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಪ್ರಕಟಣೆಯಲ್ಲಿ ತಿಳಿಸಿದರ
ರೊಡ್


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಸಾವಿರಾರು ಕಾರ್ಯಕರ್ತರ ಜಯಘೋಷದೊಂದಿಗೆ ನಡೆದ ಬೃಹತ್ ರೋಡ್ ಶೋ ಮೆರವಣಿಗೆಯ ನಡುವೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರು ನಾಮಪತ್ರ ಸಲ್ಲಿಸಿದರು ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಪ್ರಕಟಣೆಯಲ್ಲಿ ತಿಳಿಸಿದರು.

ವೀರಣ್ಣಾ ಚರಂತಿಮಠ

ನಾಮಪತ್ರ ಸಲ್ಲಿಸಿದ ಬಳಿಕ ಪ್ರಕಟಣೆಯ ಮೂಲಕ ತಿಳಿಸಿದ ನಿರಾಣಿ, ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಬಿಜೆಪಿ ಗೆಲವು ನಿಶ್ಚಿತ ಎಂದು ಅವರು ತಿಳಿಸಿದರು.

ಇದೇ ವೇಳೆ ಕೇಂದ್ರ ಸಚಿವ ಜೋಶಿ ಅವರು, ಕ್ಷೇತ್ರದಾದ್ಯಂತ ಭಾರತೀಯ ಜನತಾ ಪಕ್ಷದ ಪರವಾದ ಉತ್ತಮ ಅಲೆ ಕಂಡುಬರುತ್ತಿದ್ದು, ಜನರ ಪ್ರೀತಿ ಹಾಗೂ ಬೆಂಬಲದಿಂದ ಬಿಜೆಪಿ ಈ ಚುನಾವಣೆಯಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಪ್ರಧಾನಿ ಅವರ ಜನಪರ ಯೋಜನೆಗಳು ಹಾಗೂ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಪಕ್ಷಕ್ಕೆ ಈ ಉಪಚುನಾವಣೆಯಲ್ಲಿ ಭವ್ಯ ಜಯ ತಂದುಕೊಡಲಿವೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ್, ಸಂಸದ ಪಿ ಸಿ ಗದ್ದಿಗೌಡರ್, ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಮಾಜಿ ಸಚಿವರು ಬಿ ಶ್ರೀರಾಮಲು, ಎನ್ ಮಹೇಶ್, ಅರವಿಂದ ಲಿಂಬಾವಳಿ, ಪರಿಷತ್ ಸದಸ್ಯರು ಪಿ ಹೆಚ್ ಪೂಜಾರ್ ಹಾಗೂ ಶಾಂತಗೌಡ ಪಾಟೀಲ್ ಸೇರಿದಂತೆ ಹಲವು ರಾಜ್ಯಮಟ್ಟದ ನಾಯಕರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande