ದೇವರಹಿಪ್ಪರಗಿಯಲ್ಲಿ ಸಂವಿಧಾನ ಜಾಗೃತಿ ಸಮಾವೇಶ
ವಿಜಯಪುರ, 23 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವರ ಹಿಪ್ಪರಗಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಸಮಾವೇಶ ಹಾಗೂ ನೂತನ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂ
ಸಿಂದಗಿ


ವಿಜಯಪುರ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವರ ಹಿಪ್ಪರಗಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಸಮಾವೇಶ ಹಾಗೂ ನೂತನ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೋಮವಾರ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲ್, ಸಂವಿಧಾನದ ಆಶಯಗಳನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವುದು ಅತ್ಯಂತ ಮುಖ್ಯವಾದ ಕಾರ್ಯವಾಗಿದೆ ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿದು, ಸಮಾಜದ ಎಲ್ಲಾ ವರ್ಗದ ಜನರಿಗೆ ಸಮಾನ ಅವಕಾಶ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಶೋಕ ಮನಗೂಳಿ ಸೇರಿದಂತೆ ಪೂಜ್ಯ ಶ್ರೀಗಳು, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸಮಾವೇಶದಲ್ಲಿ ಸಂವಿಧಾನದ ಮಹತ್ವ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಚರ್ಚೆ ನಡೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande