
ದಾವಣಗೆರೆ, 23 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ಹಲವಾರು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ನಾಮ ಪತ್ರ ಸಲ್ಲಿಕೆಗು ಮುನ್ನ ನಗರದೇವತೆ ದುರ್ಗಾಂಭಿದೇವಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ, ಹಜರತ್ ಖಡಕ್ ಷಾವಲಿ ದರ್ಗಾಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಾಗುತ್ತದೆ.
ಅನಂತರ ಮೆರವಣಿಗೆ ಹಳೇಪೇಟೆ, ಹಗೇದಿಬ್ಬ ಸರ್ಕಲ್, ಗಾಂಧಿನಗರ, ಅಜಾದ್ ನಗರ, ಅಹಮ್ಮದ್ ನಗರ ರಸ್ತೆ, ಚಾರ್ಲಿ ಪೈಲ್ವಾನ್ ಸರ್ಕಲ್, ಹಾಸಬಾವಿ ಸರ್ಕಲ್, ಚಾಮರಾಜಪೇಟೆ ಮುಖ್ಯ ರಸ್ತೆ, ಮಂಡಿಪೇಟೆ ಹಾಗೂ ರೈಲ್ವೇ ಅಂಡರ್ ಬ್ರಿಡ್ಜ್ ಮಾರ್ಗವಾಗಿ ಸಾಗಲಿದೆ. ಪಿ.ಬಿ. ರಸ್ತೆ ಮೂಲಕ ಮಹಾನಗರಪಾಲಿಕೆ ಕಚೇರಿಗೆ ತಲುಪಿ ನಾಮಪತ್ರ ಸಲ್ಲಿಸುವ ಮೂಲಕ ಮೆರವಣಿಗೆ ಮಧ್ಯಾಹ್ನ 3 ಗಂಟೆಗೆ ಮುಕ್ತಾಯಗೊಳ್ಳಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa