ಕೊಪ್ಪಳ: ನಾಳೆ ವಿಶ್ವ ಕ್ಷಯರೋಗ ದಿನಾಚರಣೆ
ಕೊಪ್ಪಳ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನ ಅಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಾರ್ಚ್ 24 ರಂದು ಜಿಲ್ಲಾಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7.30 ಗಂಟೆಗೆ ಜಾಥಾವನ್ನು ಹಮ್ಮಿಕೊಳ್ಳ
ಕೊಪ್ಪಳ: ನಾಳೆ ವಿಶ್ವ ಕ್ಷಯರೋಗ ದಿನಾಚರಣೆ


ಕೊಪ್ಪಳ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನ ಅಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಾರ್ಚ್ 24 ರಂದು ಜಿಲ್ಲಾಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7.30 ಗಂಟೆಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು, ಜಾಥಾವು ಹಳೇ ಜಿಲ್ಲಾಸ್ಪತ್ರೆ ಆವರಣದಿಂದ ಆರಂಭವಾಗಿ ಬಸ್ ನಿಲ್ದಾಣ, ಸಿಂಪಿ ಲಿಂಗಣ್ಣ ರಸ್ತೆ, ದಿವಟರ್ ವೃತ್ತ, ಜವಾಹರ ರಸ್ತೆ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಜಾಥಾ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನ ಅಧಿಕಾರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande