ಉಗ್ರಾಣ ವ್ಯವಸ್ಥಾಪಕ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಭುಲ್ಲರ್ ಬಂಧನ
ಚಂಡೀಗಡ, 23 ಮಾರ್ಚ್ (ಹಿ.ಸ.): ಆ್ಯಂಕರ್:ಪಂಜಾಬ್‌ನ ಅಮೃತಸರದಲ್ಲಿ ಜಿಲ್ಲಾ ಗೋದಾಮಿನ ವ್ಯವಸ್ಥಾಪಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸಿಬಿ
ಲಾಲ್ ಜೀತ ಭಲ್ಲರ


ಚಂಡೀಗಡ, 23 ಮಾರ್ಚ್ (ಹಿ.ಸ.):

ಆ್ಯಂಕರ್:ಪಂಜಾಬ್‌ನ ಅಮೃತಸರದಲ್ಲಿ ಜಿಲ್ಲಾ ಗೋದಾಮಿನ ವ್ಯವಸ್ಥಾಪಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸಿಬಿಐ ತನಿಖೆಗೆ ಒತ್ತಾಯಗಳು ಹೆಚ್ಚಾಗಿವೆ.

ಕಳೆದ ಶನಿವಾರ ಅಮೃತಸರದ ಗೋದಾಮಿನ ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ರಾಂಧವ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಮುನ್ನ ವೀಡಿಯೊ ಸಂದೇಶವನ್ನು ರೆಕಾರ್ಡ್ ಮಾಡಿ ವೈರಲ್ ಮಾಡಿದ್ದರು. ಆ ವೀಡಿಯೊದಲ್ಲಿ ಭುಲ್ಲರ್ ಸೇರಿದಂತೆ ಕೆಲವರ ಹೆಸರನ್ನು ಉಲ್ಲೇಖಿಸಿದ್ದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಭುಲ್ಲರ್, ಅವರ ತಂದೆ ಸುಖದೇವ್ ಭುಲ್ಲರ್ ಮತ್ತು ಆಪ್ತ ಕಾರ್ಯದರ್ಶಿ ದಿಲ್ಬಾಗ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಭಾನುವಾರ ಈ ಪ್ರಕರಣದ ಹಿನ್ನೆಲೆಯಲ್ಲಿ ಪಂಜಾಬ್‌ನ ವಿವಿಧ ರಾಜಕೀಯ ಪಕ್ಷಗಳು ಚಂಡೀಗಢದಲ್ಲಿ ಪ್ರತಿಭಟನೆ ನಡೆಸಿ ಭುಲ್ಲರ್ ಬಂಧನಕ್ಕೆ ಒತ್ತಾಯಿಸಿದ್ದವು. ಅದರ ಬೆನ್ನಲ್ಲೇ ಸೋಮವಾರ ಫತೇಘರ್ ಸಾಹಿಬ್ ಪೊಲೀಸರ ಸಹಕಾರದೊಂದಿಗೆ ಮಂಡಿ ಗೋಬಿಂದ್‌ಗಢದಲ್ಲಿ ಭುಲ್ಲರ್ ಅವರನ್ನು ಬಂಧಿಸಲಾಗಿದೆ ಎಂದು ಅಮೃತಸರ ಡಿಸಿಪಿ ರವೀಂದರ್ ಪಾಲ್ ತಿಳಿಸಿದ್ದಾರೆ. ಬಂಧಿತ ಭುಲ್ಲರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ಇದೇ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಪಂಜಾಬ್‌ನ ಹಲವು ಸಂಸದರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ನ ಚರಣ್‌ಜಿತ್ ಸಿಂಗ್ ಚನ್ನಿ, ಸುಖ್‌ಜಿಂದರ್ ಸಿಂಗ್ ರಾಂಧವಾ, ಗುರ್ಜೀತ್ ಸಿಂಗ್ ಔಜ್ಲಾ ಹಾಗೂ ಧರ್ಮವೀರ್ ಗಾಂಧಿ ಸೇರಿದಂತೆ ಹಲವು ಸಂಸದರು ಈ ಸಂಬಂಧ ಪತ್ರ ಬರೆದಿದ್ದಾರೆ.

ಇದಲ್ಲದೆ, ಶಿರೋಮಣಿ ಅಕಾಲಿ ದಳದ ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಕೂಡ ಪ್ರತ್ಯೇಕವಾಗಿ ಪತ್ರ ಬರೆದು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande