ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಎನ್. ಮಹೇಶ್ ವಿಶ್ವಾಸ
ಬಾಗಲಕೋಟೆ, 24 ಮಾರ್ಚ್ (ಹಿ.ಸ.) ಆ್ಯಂಕರ್ ; ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಎನ್. ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಪರವಾಗ
ಮಹೇಶ


ಬಾಗಲಕೋಟೆ, 24 ಮಾರ್ಚ್ (ಹಿ.ಸ.)

ಆ್ಯಂಕರ್ ; ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಎನ್. ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಪರವಾಗಿ ಮತಯಾಚನೆ ಮಾಡಿದ ಸಂದರ್ಭದಲ್ಲಿ ದಲಿತ ಮತದಾರರಲ್ಲಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿರುವುದು ಕಂಡು ಬಂದಿದೆ.

ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಕಲಿಸಬೇಕು ಎಂಬ ಮನೋಭಾವ ದಲಿತ ಮತದಾರರಲ್ಲಿ ಕಾಣುತ್ತಿದೆ ಎಂದು ಹೇಳಿದರು.ಹಳಿ ತಪ್ಪಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದು, ಅಧಿಕಾರಕ್ಕಾಗಿ ಒಳಜಗಳಗಳಲ್ಲಿ ಕಾಲ ಹರಣ ಮಾಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಜನರು ತೀರ್ಮಾನಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅವರು ಹೇಳಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಮೀಸಲಿರಿಸಿದ್ದ ಎಸ್ಸಿಪಿ–ಟಿಎಸ್ಪಿ ಯೋಜನೆಗಳ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಲಾಗಿದೆ ಎಂದು ಹೇಳಿದರು.

ಎಸ್ಸಿಪಿ–ಟಿಎಸ್ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಸುಮಾರು 53 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂದು ಆರೋಪಿಸಿದ ಅವರು, ಆ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲು ಅವಕಾಶವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬುದು ಎಸ್ಸಿ-ಎಸ್ಟಿ ಸಮುದಾಯದ ಜನರಿಗೆ ತಿಳಿದಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲು ಜನರು ಸಜ್ಜಾಗಿದ್ದು, ಅದರ ಪೂರ್ವಭಾವಿಯಾಗಿ ಈ ಉಪಚುನಾವಣೆಯಲ್ಲೇ ಕಾಂಗ್ರೆಸ್ಗೆ ಉತ್ತರ ನೀಡಲಿದ್ದಾರೆ ಎಂದು ಎನ್. ಮಹೇಶ್ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande