
ಬಾಗಲಕೋಟೆ, 24 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ಬೇವೂರ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರ ಪರವಾಗಿ ಸಂಸದ ಗೋವಿಂದ ಕಾರಜೋಳ್ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎನ್. ಮಹೇಶ್ ಅವರೊಂದಿಗೆ ಸಮಾಜದ ಬಾಂಧವರನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಲಾಯಿತು.
ಗ್ರಾಮದ ಹಿರಿಯರು ಹಾಗೂ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಕ್ಷೇತ್ರದ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಕಮಲದ ಗುರುತಿಗೆ ಮತ ನೀಡುವಂತೆ ವಿನಂತಿಸಲಾಯಿತು.
ಬಾಗಲಕೋಟೆ ಕ್ಷೇತ್ರವನ್ನು ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸಲು ಡಾ. ವೀರಣ್ಣ ಚರಂತಿಮಠ ಅವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸ್ಥರು ತೋರಿದ ಅಪಾರ ಬೆಂಬಲ ಮತ್ತು ಆತ್ಮೀಯತೆ ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande