ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಸಚಿವ ಆರ್.ಬಿ. ತಿಮ್ಮಾಪುರ
ಬಾಗಲಕೋಟೆ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದ್ದು, ಅವರ ಗೆಲುವಿಗೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟ
ತಿಮ್ಮಾಪುರ


ಬಾಗಲಕೋಟೆ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದ್ದು, ಅವರ ಗೆಲುವಿಗೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಈಗಾಗಲೇ ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡಿದ್ದಾರೆ.

ಕ್ಷೇತ್ರದಾದ್ಯಂತ ಜನರನ್ನು ಭೇಟಿ ಮಾಡಿ ಸರ್ಕಾರದ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು. ಪಕ್ಷದ ಅಭ್ಯರ್ಥಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಚುನಾವಣಾ ಪ್ರಚಾರದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದು, ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande