ಬಳ್ಳಾರಿ ಜೆಸ್ಕಾಂ: ಮಾ.26 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ ಫೀಡರ್ ಗಳಾದ ಎಫ್-33, ಎಫ್-73 ವ್ಯಾಪ್ತಿಯ ವಿವಿಧೆಡೆ ಮಾ.26 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ವಿದ್
ಬಳ್ಳಾರಿ ಜೆಸ್ಕಾಂ: ಮಾ.26 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ ಫೀಡರ್ ಗಳಾದ ಎಫ್-33, ಎಫ್-73 ವ್ಯಾಪ್ತಿಯ ವಿವಿಧೆಡೆ ಮಾ.26 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-33 ರ ವ್ಯಾಪ್ತಿಯ ಕೆ.ಚ್.ಬಿ. ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್ ಫ್ಯಾಂಟರಿ ರಸ್ತೆ, ವಾಸವಿ ಶಾಲೆ, ಕೊಳಗಲ್ ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರಸ್ತೆ, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ಧಾರ್ಥ ನಗರ, ವಿಯಾನಿ ಶಾಲೆ.

ಎಫ್-73 ರ ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಒ.ಪಿ.ಡಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande