ಕೆಐಡಿಬಿ : 16 ಕೋಟಿ ರೂ. ಅವ್ಯವಹಾರ ; ಸಿಐಡಿ ತನಿಖೆಗೆ
ಬಳ್ಳಾರಿ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಬಳ್ಳಾರಿ ವಲಯ ಕಚೇರಿಯಲ್ಲಿ ಮೂವರು ಎಕ್ಸಿಕ್ಯೂಟಿವ್ ಇಂಜಿನಿಯರ್ಗಳು ಸೇವೆ ಸಲ್ಲಿಸಿದ ಅವಧಿಯಲ್ಲಿ ಹೊರ ಗುತ್ತಿಗೆ ನೌಕರನು ರೂ.16 ಕೋಟಿಗೂ ಹೆಚ್ಚಿನ ಮೊತ್ತವನ್ನು ಅಕ್ರಮವಾಗಿ ಪಡೆದು, ಅವ್ಯವಹಾರ
ಕೆಐಡಿಬಿ : 16 ಕೋಟಿ ರೂ. ಅವ್ಯವಹಾರ ; ಸಿಐಡಿ ತನಿಖೆಗೆ


ಬಳ್ಳಾರಿ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಬಳ್ಳಾರಿ ವಲಯ ಕಚೇರಿಯಲ್ಲಿ ಮೂವರು ಎಕ್ಸಿಕ್ಯೂಟಿವ್ ಇಂಜಿನಿಯರ್ಗಳು ಸೇವೆ ಸಲ್ಲಿಸಿದ ಅವಧಿಯಲ್ಲಿ ಹೊರ ಗುತ್ತಿಗೆ ನೌಕರನು ರೂ.16 ಕೋಟಿಗೂ ಹೆಚ್ಚಿನ ಮೊತ್ತವನ್ನು ಅಕ್ರಮವಾಗಿ ಪಡೆದು, ಅವ್ಯವಹಾರ ನಡೆಸಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದು, 16 ಕೋಟಿ ರೂಪಾಯಿಗಿಂತಲೂ ಹೆಚ್ಚಿನ ಹಣದ ಅವ್ಯವಹಾರ ಪ್ರಕರಣ ಇದಾಗಿದೆ. ಕಾರಣ ಬ್ಯಾಂಕಿAಗ್ ಕಾಯ್ದೆ ಪ್ರಕಾರ ಸಿಐಡಿ ತನಿಖೆಗೆ ಒಪ್ಪಿಸಲಾಗುತ್ತದೆ. ಈ ಹಗರಣವು 2022 ರಿಂದ 2026ರ ಅವಧಿಯಲ್ಲಿ ಮೂವರು ಎಕ್ಸಿಕ್ಯೂಟಿವ್ ಎಂಜಿನಿಯರ್ಗಳ ಅಧಿಕಾರವಧಿಯಲ್ಲಿ ನಡೆದಿದೆ. ಈ ಹಗರಣದಲ್ಲಿ ಬ್ಯಾಂಕ್ ಸಿಬ್ಬಂದಿಗಳು ಸೇರಿ ಹಲವರು ಪಾಲ್ಗೊಂಡಿದ್ದಾರೆ ಎಂದು ಹೇಳಿದರು.

ಹೊರ ಗುತ್ತಿಗೆ ನೌಕರನು ಎಕ್ಸಿಕ್ಯೂಟಿವ್ ಇಂಜಿನಿಯರರುಗಳ ನಕಲಿ ಸಹಿ ಮತ್ತು ಚೆಕ್ಗಳನ್ನು ಬಳಕೆ ಮಾಡಿಕೊಂಡು ಒಟ್ಟು ರೂ. 16,17,98,916 ಹಣವನ್ನು ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿ, ವಂಚನೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande