ಮಣಿಪುರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ:ಪ್ರೀಪಾಕ್ ಸಂಘಟನೆಯ 10 ಕಾರ್ಯಕರ್ತರ ಬಂಧನ
ಇಂಫಾಲ, 24 ಮಾರ್ಚ್ (ಹಿ.ಸ.): ಆ್ಯಂಕರ್: ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ವಿರುದ್ಧ ಭದ್ರತಾ ಪಡೆಗಳು ಕೈಗೊಂಡಿರುವ ನಿರಂತರ ಕಾರ್ಯಾಚರಣೆಯಲ್ಲಿ, ತೆಂಗನೌಪಾಲ್ ಜಿಲ್ಲೆಯಲ್ಲಿ ಪ್ರೀಪಾಕ್ ಸಂಘಟನೆಯ 10 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರ ಪೋಲಿಸ್ ಪ್ರಧಾನ ಕಚೇರಿ
Arrest


ಇಂಫಾಲ, 24 ಮಾರ್ಚ್ (ಹಿ.ಸ.):

ಆ್ಯಂಕರ್:

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ವಿರುದ್ಧ ಭದ್ರತಾ ಪಡೆಗಳು ಕೈಗೊಂಡಿರುವ ನಿರಂತರ ಕಾರ್ಯಾಚರಣೆಯಲ್ಲಿ, ತೆಂಗನೌಪಾಲ್ ಜಿಲ್ಲೆಯಲ್ಲಿ ಪ್ರೀಪಾಕ್ ಸಂಘಟನೆಯ 10 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರ ಪೋಲಿಸ್ ಪ್ರಧಾನ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೋಮವಾರ ಸಂಯುಕ್ತ ಕಾರ್ಯಾಚರಣೆ ನಡೆಸಿ, ಮೊರೆಹ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತ–ಮ್ಯಾನ್ಮಾರ್ ಅಂತರಾಷ್ಟ್ರೀಯ ಗಡಿಯ 77ರಿಂದ 82ನೇ ಕಂಬಗಳ ನಡುವೆ ಈ ಬಂಧನಗಳು ನಡೆದಿವೆ.

ಬಂಧಿತರಲ್ಲಿ ಐವರು ಬಾಲಾಪರಾಧಿಗಳಾಗಿದ್ದು, ಅವರಿಗೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಪ್ರತ್ಯೇಕ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಬಂಧಿತ ಪ್ರಮುಖ ಆರೋಪಿಗಳನ್ನು ಕೀಥೆಲಕ್ಪಾಮ್ ಷಂಜಿತ್ ಸಿಂಗ್ (34), ಸಲಾಮ್ ರೋಹಿತ್ ಮೈಟೆಯಿ (35), ಖೈದೆಮ್ ಜಾಕ್ಸನ್ ಸಿಂಗ್ (27), ಕ್ಷತ್ರಿಯಂ ಇನೋಸಾನ ಸಿಂಗ್ (36) ಹಾಗೂ ಸೆಂಜಮ್ ಥೋಬಿನಾವೊ ಮೈಟೆಯಿ (36) ಎಂದು ಗುರುತಿಸಲಾಗಿದೆ.

ಈ ಎಲ್ಲಾ ಆರೋಪಿಗಳು ನಿಷೇಧಿತ ಉಗ್ರ ಸಂಘಟನೆಯಾದ ಪ್ರೀಪಾಕ್ ಗೆ ಸಕ್ರಿಯವಾಗಿ ಸಂಬಂಧ ಹೊಂದಿದ್ದರು ಎಂದು ಶಂಕಿಸಲಾಗಿದೆ. ಭದ್ರತಾ ಪಡೆಗಳು ಇವರಿಂದ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ವಿಚಾರಣೆ ಮುಂದುವರೆಸಿವೆ.

ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ನಿಷೇಧಿತ ಸಂಘಟನೆಗಳ ವಿರುದ್ಧ ಕಾರ್ಯಾಚರಣೆಗಳನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande