
ವಿಜಯಪುರ, 24 ಮಾರ್ಚ್ (ಹಿ.ಸ.)
ಆ್ಯಂಕರ್ : ಸಮಾಜದಲ್ಲಿ ಲಿಂಗ ಸಮಾನತೆ ಸ್ಥಾಪನೆ ಅಗತ್ಯವಾಗಿದ್ದು, “ಆತ್ಮಕ್ಕೆ ಲಿಂಗಭೇದವಿಲ್ಲ” ಎಂದು ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಕುಲಪತಿ ಪ್ರೋ: ವಿಜಯಾ ಬಿ ಕೊರಿಶೆಟ್ಟಿ ಅವರು ಹೇಳಿದರು.
ನಗರದಲ್ಲಿರುವ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಲಿಂಗ ಅಸಮಾನತೆ ಸಮಾಜದ ಪ್ರಗತಿಗೆ ಅಡ್ಡಿಯಾಗುತ್ತದೆ. ಆದ್ದರಿಂದ ಅದನ್ನು ನಿವಾರಿಸಲು ಸಮಾಜದ ಮನೋಭಾವದಲ್ಲಿ ಬದಲಾವಣೆ ಅಗತ್ಯವಾಗಿದೆ. ಮಹಿಳೆಯರು ಶಿಕ್ಷಣ, ಆತ್ಮವಿಶ್ವಾಸ ಹಾಗೂ ಆರ್ಥಿಕ ಸ್ವಾವಲಂಬನೆ ಮೂಲಕ ಸಬಲೀಕರಿಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ್ ಮಾತನಾಡಿ, ಆದ್ಯ ಕವಿ ದೇವರ ದಾಸಿಮಯ್ಯ ಅವರ ವಚನಗಳನ್ನು ವಿವರಿಸಿ ಅವುಗಳ ಅರ್ಥವನ್ನು ಸುಂದರವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೋ : ಬಿ ಎಲ್ ಲಕ್ಕಣ್ಣವರ್, ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕ ಡಾ. ಕಿರಣ ಸ್ವಾಗತಿಸಿದರು. ಸ್ಫೂರ್ತಿ ಮತ್ತು ತೇಜಸ್ವಿನಿ ಪ್ರಾರ್ಥನೆ ಸಲ್ಲಿಸಿದರು. ಅಶ್ವಿನಿ ಆರ್.ಎಸ್. ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande