ರಾಜ್ಯದಲ್ಲಿ ಬಿಸಿಲಿನ ನಡುವೆ ಗುಡುಗು-ಮಳೆಯ ಮುನ್ಸೂಚನೆ
ಬೆಂಗಳೂರು, 24 ಮಾರ್ಚ್ (ಹಿ.ಸ.): ಆ್ಯಂಕರ್:ಹವಾಮಾನ ಇಲಾಖೆ ನೀಡಿರುವ ಮುಂದಿನ ಏಳು ದಿನಗಳ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ದಿನದ ವೇಳೆ ಉಷ್ಣಾಂಶ ಹೆಚ್ಚಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡ ಕವಿದ ವಾ
Imd


ಬೆಂಗಳೂರು, 24 ಮಾರ್ಚ್ (ಹಿ.ಸ.):

ಆ್ಯಂಕರ್:ಹವಾಮಾನ ಇಲಾಖೆ ನೀಡಿರುವ ಮುಂದಿನ ಏಳು ದಿನಗಳ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ದಿನದ ವೇಳೆ ಉಷ್ಣಾಂಶ ಹೆಚ್ಚಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಇದೇ ವೇಳೆ, ಮಾರ್ಚ್ 28ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ವ್ಯತ್ಯಾಸ ಉಂಟಾಗಿ, ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಹವಾಮಾನದಲ್ಲಿ ಅಸ್ಥಿರತೆ ಕಾಣಿಸಿಕೊಳ್ಳುವ ಹಿನ್ನೆಲೆ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ವಿಶೇಷವಾಗಿ ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು, ತೆರೆಯ ಪ್ರದೇಶಗಳಲ್ಲಿ ನಿಲ್ಲುವುದನ್ನು ತಪ್ಪಿಸುವುದು ಅಗತ್ಯ ಎಂದು ಇಲಾಖೆ ಸಲಹೆ ನೀಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande