ಜನರಿಂದನೇ ಅಂಗನವಾಡಿ ಕಟ್ಟಡ ಕಾಮಗಾರಿಗೆ ಚಾಲನೆ ಮಾಡಿಸಿದ ಶಾಸಕ ಯಶವಂತರಾಯಗೌಡ
ವಿಜಯಪುರ, 24 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಡನೂರ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಗ್ರಾಮದ ಜನರಿಂದನೇ ಭೂಮಿ ಪೂಜೆ ಮಾಡಿಸುವ ಮೂಲಕ ಶಾಸಕ ಯಶವಂತರಾಯಗೌಡ ಪಾಟೀಲ್ ಮಾದರಿ ಶಾಸಕ ಎನಿಸಿದರು. ಈ ಕುರಿತು ಪ್ರಕಟಣೆ ಮೂಲಕ ತಿಳಿಸಿದ ಶಾಸಕ ಯಶವಂತ
ಗ್ರಾಮದಲ್ಲಿ


ವಿಜಯಪುರ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಡನೂರ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಗ್ರಾಮದ ಜನರಿಂದನೇ ಭೂಮಿ ಪೂಜೆ ಮಾಡಿಸುವ ಮೂಲಕ ಶಾಸಕ ಯಶವಂತರಾಯಗೌಡ ಪಾಟೀಲ್ ಮಾದರಿ ಶಾಸಕ ಎನಿಸಿದರು.

ಈ ಕುರಿತು ಪ್ರಕಟಣೆ ಮೂಲಕ ತಿಳಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್, ಜನರಿಂದಲೇ ನಾನು ಶಾಸಕನಾಗಿದ್ದು ಹಾಗಾಗಿ ಅವರಿಂದಲೇ ಭೂಮಿ ಪೂಜೆ ಮಾಡಿಸುವ ಮೂಲಕ ಅವರ ಜವಾಬ್ದಾರಿಯನ್ನು ಹೆಚ್ಚಿಸುವ ಕಾರ್ಯಕ್ಕೆ ಮುಂದಾಗಿದ್ದು ಎಂದು ಅವರು ತಿಳಿಸಿದರು.

ಗ್ರಾಮದಲ್ಲಿ ಮಕ್ಕಳ ಹಿತ ದಷ್ಟಿಯಿಂದ ಮಂಜೂರಾಗಿರುವ ಈ ಸುಸಜ್ಜಿತ ಅಂಗನವಾಡಿ ಕಟ್ಟಡವು ಶೀಘ್ರದಲ್ಲೇ ಪೂರ್ಣಗೊಂಡು ಲೋಕಾರ್ಪಣೆಯಾಗಲಿದೆ ಎಂದು ತಿಳಿಸಿದರು.

ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದ್ದು, ಪಡನೂರ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ನಾವು ಸದಾ ಬದ್ಧರಾಗಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಅಂಗನವಾಡಿ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande