ಬಳ್ಳಾರಿ- ಮಾ.27 ರಂದು ಮಿನಿ ಉದ್ಯೋಗ ಮೇಳ
ಬಳ್ಳಾರಿ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಾರ್ಚ್ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಿದೆ. ಜೀಟಾ, ಪಿಟ್ಟಿ (ಇಂಡಸ್ಟ್ರೀಸ್ ಪ್ರೈ.ಲಿ.), ಟೊಯೋಟಾ, ಫಾಕ್ಸ್ಕಾನ್, ಶ್
ಬಳ್ಳಾರಿ- ಮಾ.27 ರಂದು ಮಿನಿ ಉದ್ಯೋಗ ಮೇಳ


ಬಳ್ಳಾರಿ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಾರ್ಚ್ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಿದೆ.

ಜೀಟಾ, ಪಿಟ್ಟಿ (ಇಂಡಸ್ಟ್ರೀಸ್ ಪ್ರೈ.ಲಿ.), ಟೊಯೋಟಾ, ಫಾಕ್ಸ್ಕಾನ್, ಶ್ರೀ ವರ್ಧನ್ ಎಫ್ಎಂಸಿಜಿ ಮತ್ತು ಶ್ರೀರಾಮ್ ಫೈನಾನ್ಸ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಎಂಜಿನಿಯರಿಂಗ್ ಪದವಿ ಹೊಂದಿರಬೇಕು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿಗಳೊಂದಿಗೆ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande