ನಾಳೆ ವಿಶ್ವ ಗ್ರಾಹಕರ ದಿನಾಚರಣೆ-2026
ಗದಗ, 24 ಮಾರ್ಚ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕ
ನಾಳೆ ವಿಶ್ವ ಗ್ರಾಹಕರ ದಿನಾಚರಣೆ-2026


ಗದಗ, 24 ಮಾರ್ಚ್ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹಾಗೂ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ, ಗದಗ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ 25 ರಂದು ಮಧ್ಯಾಹ್ನ 3 ಗಂಟೆಗೆ ನಾಗಾವಿಯ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ಕೌಶಲ್ಯ ವಿಕಾಸ ಭವನ ಗ್ರಾಮ ಗಂಗೋತ್ರಿ ಆವರಣದಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್. ಶ್ರೀಧರ ಉದ್ಘಾಟಿಸಲಿದ್ದಾರೆ. ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎ.ಜಿ. ಮಾಲ್ದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಕುಲಪತಿಗಳು (ಪ್ರ) ಮತ್ತು ಕುಲಸಚಿವ ಪ್ರೊ. ಡಾ. ಸುರೇಶ ವಿ ನಾಡಗೌಡರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ್ , ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ.ಪಲ್ಲೇದ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ.ಕಲ್ಲೂರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಶ್ರೀಮತಿ ಯಶೋಧಾ ಪಾಟೀಲ ಆಗಮಿಸುವರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಎಸ್.ಡಿ, ಪಾಟೀಲ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕರಾದ ಶ್ರೀಮತಿ ಆರ್.ಎಸ್.ಪಟ್ಟಣಶೆಟ್ಟಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande