
ಬಳ್ಳಾರಿ, 24 ಮಾರ್ಚ್ (ಹಿ.ಸ.)
ಆ್ಯಂಕರ್ :
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ‘ಸುರಕ್ಷಿತ ಉತ್ಪನ್ನಗಳು ಆತ್ಮ ವಿಶ್ವಾಸದ ಗ್ರಾಹಕರು’ ಎಂಬ ಘೋಷವಾಕ್ಯದಡಿ ಮಾ.25 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಮುಖ್ಯ ರಸ್ತೆಯ ಮೇದಾ ಪದವಿ ಪೂರ್ವ ವಿದ್ಯಾಲಯದ ಮೇದಾ ಆಡಿಟೋರಿಯಮ್ ಹಾಲ್ ನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ. ಶಾಂತಿ ಅವರು ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಘನ ಉಪಸ್ಥಿತಿ ಇರುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆ ಮಾರ್ಲಾ ಶಶಿಕಲಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಬ್ರಹ್ಮಂ, ಶ್ರೀ ಮೇದಾ ಪದವಿ ಪೂರ್ವ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ರಾಮ್ ಕಿರಣ್, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಮನೋಜ್ ಕುಮಾರ್ ಸೇರಿದಂತೆ ಇತರರು ಭಾಗವಹಿಸುವರು.
ಜಿಲ್ಲಾ ಹಿರಿಯ ವಕೀಲರಾದ ಅಂಕಲಯ್ಯ ಮತ್ತು ಎನ್.ಪ್ರಕಾಶ್ ಅವರು ‘ಸುರಕ್ಷಿತ ಉತ್ಪನ್ನಗಳು ಆತ್ಮ ವಿಶ್ವಾಸದ ಗ್ರಾಹಕರು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಉ ಉಪನಿರ್ದೇಶಕ ದೇವರಾಜ್ ಕೆ.ಆರ್ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್