
ಗದಗ, 25 ಮಾರ್ಚ್ (ಹಿ.ಸ.)
ಆ್ಯಂಕರ್:- 2,000 ರೂ. ಜಮಾ ಆಗದ ಗೃಹಲಕ್ಷ್ಮೀ ಫಲಾನುಭವಿಗಳು ಬ್ಯಾಂಕ್, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಆನ್ಲೈನ್ ಸೆಂಟರ್ಗಳಲ್ಲಿ ಎನ್ ಪಿ ಸಿ ಐ ಲಿಂಕ್ ಮಾಡಿಸಬೇಕು ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗೃಹಲಕ್ಷ್ಮೀ ಫಲಾನುಭವಿಗಳಿಗೆ 2,000 ರೂ. ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ತಮ್ಮ ಪಾಸ್ಬುಕ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ತೆಗೆದುಕೊಂಡು ತಮ್ಮ ಖಾತೆ ಇರುವ ಬ್ಯಾಂಕ್ ಇಲ್ಲವೇ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಆನ್ಲೈನ್ ಸೆಂಟರ್ಗಳಲ್ಲಿ ಎನ್ಸಿಪಿಐ ಲಿಂಕ್ ಮಾಡಿಸಬೇಕು.
ಮಾಹಿತಿಗಾಗಿ ಮುಳಗುಂದ ನಾಕಾ ಬಳಿಯ ಕೆಎಸ್ಆರ್ಟಿಸಿ ಡಿಪೋ ಎದುರಿಗಿನ ಉಪವಿಭಾಗೀಯ ಕಚೇರಿ ಆವರಣದಲ್ಲಿರುವ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಕಚೇರಿಗೆ ಕಚೇರಿ ಅವಧಿಯಲ್ಲಿ ಭೇಟಿ ನೀಡಬಹುದಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP