
ಬಾಗಲಕೋಟೆ, 25 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ತಮ್ಮ ಚುನಾವಣಾ ಪ್ರಚಾರವನ್ನು ಸೀತಿಮಣಿ ಗ್ರಾಮದಿಂದ ಆರಂಭಿಸಿದರು.
ಸೀತಿಮಣಿ ಗ್ರಾಮದ ಕಲ್ಯಾಣ ತಾಯಿ ಹಾಗೂ ರಾಮಸ್ವಾಮಿ ಮುತ್ಯಾನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು, ಬಳಿಕ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಸ್.ಜಿ. ನಂಜಯ್ಯನಮಠ, ಬಸವಂತಪ್ಪ ಮೇಟಿ, ಬಲರಾಮ ಪವಾರ್, ಮಲ್ಲಿಕಾರ್ಜುನ ಚರಂತಿಮಠ, ಗುರು ಅನಗವಾಡಿ, ಜಟ್ಟೆಪ್ಪ ಮಾದಾಪೂರ, ಎಸ್.ಎನ್. ರಾಂಪುರ ಹಾಗೂ ಮಹಾದೇವಿ ಮೇಟಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande