ಬಾಗಲಕೋಟೆ ಉಪಚುನಾವಣೆ: ಉಮೇಶ್ ಮೇಟಿ ಭರ್ಜರಿ ಪ್ರಚಾರ
ಬಾಗಲಕೋಟೆ, 25 ಮಾರ್ಚ್ (ಹಿ.ಸ.) ಆ್ಯಂಕರ್ : ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ಭರ್ಜರಿ ಪ್ರಚಾರ ನಡೆಸಿದರು. ಮೇಟಿ ಅವರ ಪ್ರಚಾರದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಜಿಲ್ಲಾ ಕಾಂಗ್ರ
ಮೆಟಿ


ಬಾಗಲಕೋಟೆ, 25 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ಭರ್ಜರಿ ಪ್ರಚಾರ ನಡೆಸಿದರು.

ಮೇಟಿ ಅವರ ಪ್ರಚಾರದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಪ್ರಚಾರದ ವೇಳೆ ಮತದಾರರನ್ನು ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ್ ಮೇಟಿ ಅವರು, ಕ್ಷೇತ್ರದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ಹಾಗೂ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ. ದೇವರ ಆಶೀರ್ವಾದ ಮತ್ತು ಮತದಾರರ ಬೆಂಬಲದಿಂದ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ತಂದೆಯನ್ನು ಸದಾ ಸ್ಮರಿಸುತ್ತೇನೆ. ಅವರು ಇಲ್ಲ ಎನ್ನುವ ಕೊರತೆ ನನಗಿಲ್ಲ. ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂಜಯ್ಯನಮಠ ಅವರು ನನಗೆ ತಂದೆ ಸಮಾನರು. ನನ್ನ ತಂದೆಯನ್ನು ಅವರ ಮೂಲಕವೇ ಕಾಣುತ್ತೇನೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande