ಬ್ಯಾರೇಜ್ ಕಾಮಗಾರಿ ಸ್ಥಗಿತಗೊಳಿಸಲು ಭೀಮರಾಜ ಸೇನೆ ಆಗ್ರಹ
ವಿಜಯಪುರ, 25 ಮಾರ್ಚ್ (ಹಿ.ಸ.) ಆ್ಯಂಕರ್ : ಬಿಂಜಲಭಾವಿ ಮತ್ತು ಬಿ.ಬಿ. ಇಂಗಳಗಿ ಗ್ರಾಮಗಳ ಮಧ್ಯದಲ್ಲಿರುವ ನಾಯಿ ಹಳ್ಳಕ್ಕೆ ನಿರ್ಮಾಣ ಮಾಡಲಾಗುತ್ತಿರುವ ಬ್ರಿಜ್ ಕಮ್ ಬ್ಯಾರೇಜ್ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ವಿಜಯಪು
ಸಭೆ


ವಿಜಯಪುರ, 25 ಮಾರ್ಚ್ (ಹಿ.ಸ.)

ಆ್ಯಂಕರ್ : ಬಿಂಜಲಭಾವಿ ಮತ್ತು ಬಿ.ಬಿ. ಇಂಗಳಗಿ ಗ್ರಾಮಗಳ ಮಧ್ಯದಲ್ಲಿರುವ ನಾಯಿ ಹಳ್ಳಕ್ಕೆ ನಿರ್ಮಾಣ ಮಾಡಲಾಗುತ್ತಿರುವ ಬ್ರಿಜ್ ಕಮ್ ಬ್ಯಾರೇಜ್ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ವಿಜಯಪುರದಲ್ಲಿ ಭೀಮರಾಜ ಸೇನೆಯ ರಾಜ್ಯಾಧ್ಯಕ್ಷ ಶಿವು ನಾಟಿಕರ್ ಹಾಗೂ ಜಿಲ್ಲಾಧ್ಯಕ್ಷ ಶ್ರೀಕಾಂತ್ ಬಿಜಾಪುರ

ಆಗ್ರಹಿಸಿದರು.

ವಿಜಯಪುರ ನಗರದ ನೂತನ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಟಿಕಾರ್, ಬಿಂಜಲಭಾವಿ ಮತ್ತು ಬಿ.ಬಿ. ಇಂಗಳಗಿ ಗ್ರಾಮಗಳ ಮಧ್ಯದ ನಾಯಿ ಹಳ್ಳದಲ್ಲಿ ನಿರ್ಮಾಣವಾಗುತ್ತಿರುವ ಬ್ರಿಜ್ ಕಮ್ ಬ್ಯಾರೇಜ್ ರೈತರು, ಜಾನುವಾರುಗಳು ಅಥವಾ ಸಾರ್ವಜನಿಕರಿಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ಅಲ್ಲಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ ಈ ಕಾಮಗಾರಿ ಸಾರ್ವಜನಿಕ ಹಿತಕ್ಕೆ ಅನುಕೂಲವಾಗುವುದಿಲ್ಲ ಎಂದು ಆರೋಪಿಸಿದರು.

ಕೆಲವು ಪ್ರಭಾವಿಗಳ ಅನುಕೂಲಕ್ಕಾಗಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಅವರು, ಬಿಂಜಲಭಾವಿ, ಕೆಸರಟ್ಟಿ ಮತ್ತು ಅಂಬಳನೂರ ಗ್ರಾಮಗಳ ಹಳ್ಳಗಳು ಸೇರುವ ಸ್ಥಳಕ್ಕೆ ಈ ಕಾಮಗಾರಿಯನ್ನು ಸ್ಥಳಾಂತರಿಸಿದರೆ ಬಿಂಜಲಭಾವಿ, ಕೆಸರಟ್ಟಿ, ಅಂಬಳನೂರ ಹಾಗೂ ಬಿ.ಬಿ. ಇಂಗಳಗಿ ಗ್ರಾಮಗಳ ರೈತರು ಮತ್ತು ಜನರಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ ಎಂದು ಹೇಳಿದರು.

ಈ ಮೂರು ಹಳ್ಳಗಳು ಸೇರುವ ಸ್ಥಳದಲ್ಲಿ ಬ್ರಿಜ್ ಕಮ್ ಬ್ಯಾರೇಜ್ ನಿರ್ಮಿಸಿದರೆ ಕೃಷಿ ಚಟುವಟಿಕೆಗಳಿಗೆ, ಜಾನುವಾರುಗಳಿಗೆ ಹಾಗೂ ಗ್ರಾಮಸ್ಥರಿಗೆ ನೀರಿನ ಸೌಲಭ್ಯ ದೊರೆಯುತ್ತದೆ. ಆದರೆ ನಾಯಿ ಹಳ್ಳದಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ ನಿರ್ಮಾಣವಾಗುತ್ತಿರುವ ಕಾಮಗಾರಿ ವ್ಯರ್ಥವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಕುರಿತು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ್ ಅವರ ಗಮನಕ್ಕೆ ತರಲಾಗಿದ್ದು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.ಆದರೆ ಕಾಮಗಾರಿ ಸ್ಥಗಿತಗೊಳಿಸುವ ಅಥವಾ ಸ್ಥಳಾಂತರಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದರು.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಸ್ಥಗಿತಗೊಳಿಸಿ ನಾಲ್ಕು ಗ್ರಾಮಗಳ ಜನರಿಗೆ ಅನುಕೂಲವಾಗುವ ಸ್ಥಳದಲ್ಲಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದರೆ ವಿಜಯಪುರ ಸಣ್ಣ ನೀರಾವರಿ ಇಲಾಖೆ ಕಚೇರಿ ಎದುರು ರೈತರೊಂದಿಗೆ ಸೇರಿ ಹೋರಾಟ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಶಿವು ನಾಟೀಕಾರ, ಜಿಲ್ಲಾಧ್ಯಕ್ಷ ಶ್ರೀಕಾಂತ್ ಬಿಜಾಪುರ ಹಾಗೂ ರುದ್ರಗೌಡ ಭಿಂಜಲಭಾವಿ ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande