
ಬೆಂಗಳೂರು, 25 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಇಂದು ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ಸಭೆ ನಡೆಸಿದರು.
ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಗೋಪಿನಾಥ್ ಪಳನಿಯಪ್ಪನ್, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ. ರೇವಣ್ಣ, ಉಪಾಧ್ಯಕ್ಷರಾದ ಮೆಹರೋಜ್ ಖಾನ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa