
ಬಾಗಲಕೋಟೆ, 25 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಕೆಎಚ್ಡಿಸಿ ಕಾಲೊನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವ ಘಟನೆ ನಡೆದಿದೆ.
ಕೆಎಚ್ಡಿಸಿ ಕಾಲೊನಿಯ ನಿವಾಸಿ ಶಿವಾನಂದ ಬೆಳಕೂಡ ಅವರ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರಿಗೆ ಸಣ್ಣಪುಟ್ಟ ಗಾಯಗೊಂಡಿದ್ದು ಮನೆಯೊಳಗಿನ ವಸ್ತುಗಳು ಹಾನಿಗೊಂಡಿವೆ.
ಸ್ಫೋಟದ ಶಬ್ದಕ್ಕೆ ಸುತ್ತಮುತ್ತಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ಘಟನೆಯ ವೇಳೆ ಮನೆಯಲ್ಲಿದ್ದವರು ಅದೃಷ್ಟವಶಾತ್ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.
ಸ್ಫೋಟದಿಂದ ಮನೆಯೊಳಗಿನ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲವು ವಸ್ತುಗಳಿಗೆ ಹಾನಿಯಾಗಿದೆ.
ಘಟನೆ ಕುರಿತು ಅಗ್ನಿ ಶಾಮಕದಳ ಸಿಬ್ಬಂದಿಗಳು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande