
ಬಳ್ಳಾರಿ, 25 ಮಾರ್ಚ್ (ಹಿ.ಸ.)
ಆ್ಯಂಕರ್ : ನಗರದ ಕೌಲ್ ಬಜಾರ್ ನ ತಿಲಕ್ ನಗರದ ಸಾಯಿಬಾಬಾ ದೇವಸ್ಥಾನದ ಹತ್ತಿರ ನಿವಾಸಿ ಯುವರಾಜ್ ಎನ್ನುವ 26 ವರ್ಷದ ವ್ಯಕ್ತಿ ಮಾ.23 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ:
ಎತ್ತರ ಅಂದಾಜು 5 ಅಡಿ, ದುಂಡು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ ಮತ್ತು ಮೀಸೆ ಹೊಂದಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ಬಜಾರ್ ಪೊಲೀಸ್ ಠಾಣೆಯ ದೂ.08392240731, 08392244145, ಪಿ.ಐ ಮೊ.9480803047, ಪಿಎಸ್ಐ 94808203084, 9480803085 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್