ಮಾ.27 ರಂದು ಮಹಿಳಾ ನೌಕರರ ಪ್ರಾತಿನಿಧ್ಯ ‘ವಿಚಾರ ಸಂಕಿರಣ’
ಬಳ್ಳಾರಿ, 25 ಮಾರ್ಚ್ (ಹಿ.ಸ.) ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರಿ ಸೇವೆಯಲ್ಲಿ ಮಹಿಳಾ ನೌಕರರ ಪ್ರಾತಿನಿಧ್ಯ ಕುರಿತು ಮಾ.27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದ ಡಿ.ಎನ್.ಬಿ. ಸ
ಮಾ.27 ರಂದು ಮಹಿಳಾ ನೌಕರರ ಪ್ರಾತಿನಿಧ್ಯ ‘ವಿಚಾರ ಸಂಕಿರಣ’


ಬಳ್ಳಾರಿ, 25 ಮಾರ್ಚ್ (ಹಿ.ಸ.)

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರಿ ಸೇವೆಯಲ್ಲಿ ಮಹಿಳಾ ನೌಕರರ ಪ್ರಾತಿನಿಧ್ಯ ಕುರಿತು ಮಾ.27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದ ಡಿ.ಎನ್.ಬಿ. ಸಭಾಂಗಣದಲ್ಲಿ “ವಿಚಾರ ಸಂಕೀರಣ” ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಂಗಳೂರು ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಘನ ಉಪಸ್ಥಿತಿ ಇರುವರು.

ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ಆಲೂರು ಅವರು ಕಾರ್ಯಕ್ರಮದ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಸೇರಿದಂತೆ ಜಿಲ್ಲಾ ಮಟ್ಟದ ಮಹಿಳಾ ಅಧಿಕಾರಿಗಳು ಭಾಗವಹಿಸುವರು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು ಹಾಗೂ ಬಳ್ಳಾರಿ ಜಿಲ್ಲಾ ಶಾಖೆ ಜಿಲ್ಲಾಧ್ಯಕ್ಷ ಸದಾನಂದ ನೆಲ್ಕುದ್ರಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande