
ನವದೆಹಲಿ, 25 ಮಾರ್ಚ್ (ಹಿ.ಸ.):
ಆ್ಯಂಕರ್:
ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಹೊಟ್ಟೆ ಸೋಂಕಿನ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಆಸ್ಪತ್ರೆ ಬಿಡುಗಡೆ ಮಾಡಿದ ವೈದ್ಯಕೀಯ ಪ್ರಕಟಣೆಯ ಪ್ರಕಾರ, ಮಂಗಳವಾರ ರಾತ್ರಿ 10:22 ಗಂಟೆಗೆ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣವೇ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಹೊಟ್ಟೆ ಹಾಗೂ ಮೂತ್ರನಾಳದ ಸೋಂಕಿನ ಸಾಧ್ಯತೆ ಹಿನ್ನೆಲೆ ವಿವಿಧ ಪರೀಕ್ಷೆಗಳು ನಡೆಯುತ್ತಿವೆ.
ಆಸ್ಪತ್ರೆಯ ಅಧ್ಯಕ್ಷ ಡಾ. ಅಜಯ ಸ್ವರೂಪ ಮಾಹಿತಿ ನೀಡಿದ್ದು, ತಜ್ಞ ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿಕಟ ನಿಗಾ ಇಟ್ಟಿದೆ ಎಂದು ತಿಳಿಸಿದ್ದಾರೆ. ಚಿಕಿತ್ಸೆ ಭಾಗವಾಗಿ ಪ್ರತಿಜೀವಕ ಔಷಧಿಗಳನ್ನು ನೀಡಲಾಗುತ್ತಿದ್ದು, ಅಗತ್ಯ ವೈದ್ಯಕೀಯ ಆರೈಕೆ ಒದಗಿಸಲಾಗುತ್ತಿದೆ.
ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa