
ಬಾಗಲಕೋಟೆ, 25 ಮಾರ್ಚ್ (ಹಿ.ಸ.)
ಆ್ಯಂಕರ್ : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಕಾಲುವೆಗೆ ಉರುಳಿಬಿದ್ದ ಪರಿಣಾಮ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಮರೇಗುದ್ದಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಶಿವಕುಮಾರ ಗಸ್ತಿ ಎಂದು ಗುರುತಿಸಲಾಗಿದೆ. ಕಾಲುವೆ ಪಕ್ಕದ ರಸ್ತೆಯಲ್ಲಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಕಾಲುವೆಗೆ ಬಿದ್ದಿದೆ ಎಂದು ತಿಳಿದು ಬಂದಿದೆ.
ಅವಘಡದ ವೇಳೆ ಟ್ರ್ಯಾಕ್ಟರ್ನಲ್ಲಿ ಇದ್ದ ಇನ್ನೋರ್ವ ಯುವಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಸಂಬಂಧ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande