ದೇಶದ ಮೊದಲ ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟಕ್ಕೆ ಇಂದು ಚಾಲನೆ
ನವದೆಹಲಿ, 25 ಮಾರ್ಚ್ (ಹಿ.ಸ.): ಆ್ಯಂಕರ್:ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಲ್ಪಡುತ್ತಿರುವ ‘ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ’ವನ್ನು ಇಂದು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟಿಸಲಿದ್ದಾರೆ. ಛತ್ತೀಸ್‌ಗಢ ಸರ್ಕಾರದ ಆತಿಥ್ಯದಲ್ಲಿ ನಡೆಯುತ್ತಿರುವ ಈ ಐತಿಹಾಸಿ
Mansuk mandviya


ನವದೆಹಲಿ, 25 ಮಾರ್ಚ್ (ಹಿ.ಸ.):

ಆ್ಯಂಕರ್:ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಲ್ಪಡುತ್ತಿರುವ ‘ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ’ವನ್ನು ಇಂದು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟಿಸಲಿದ್ದಾರೆ.

ಛತ್ತೀಸ್‌ಗಢ ಸರ್ಕಾರದ ಆತಿಥ್ಯದಲ್ಲಿ ನಡೆಯುತ್ತಿರುವ ಈ ಐತಿಹಾಸಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವ ಅರುಣ್ ಸಾವೊ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಇನ್ನೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ತೋಖನ್ ಸಾಹು, ಛತ್ತೀಸ್‌ಗಢ ವಿಧಾನಸಭಾ ಸ್ಪೀಕರ್ ಡಾ. ರಮಣ್ ಸಿಂಗ್ ಹಾಗೂ ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಸಚಿವ ಮನ್ಸುಖ್ ಮಾಂಡವಿಯಾ ಇಂದು ಸಂಜೆ 5:30ಕ್ಕೆ ನವದೆಹಲಿಯಿಂದ ರಾಯ್ಪುರಕ್ಕೆ ಆಗಮಿಸಲಿದ್ದು, ಸಂಜೆ 6 ಗಂಟೆಗೆ ವಿಜ್ಞಾನ ಕಾಲೇಜು ಆವರಣದಲ್ಲಿ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande