
ಕೊಪ್ಪಳ, 26 ಮಾರ್ಚ್ (ಹಿ.ಸ.)
ಆ್ಯಂಕರ್ : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾರ್ಚ್ 28 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ಸಮಾಜದ ಮುಖಂಡರ ಕೋರಿಕೆಯಂತೆ ಸರಳವಾಗಿ ಆಚರಿಸಲಾಗುವುದು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ತಮ್ಮ ಕಾರ್ಯಾಲಯ ಹಾಗೂ ತಮ್ಮ ಅಧೀನ ಕಾರ್ಯಾಲಯಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್