
ಬಳ್ಳಾರಿ, 26 ಮಾರ್ಚ್ (ಹಿ.ಸ.):
ಆ್ಯಂಕರ್ : ಧಾರವಾಡ ನಗರದ ಸಪ್ತಾಪುರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮೀಣ ಪ್ರದೇಶದ ಹಾಗೂ ರಾಜ್ಯದ ಇತರ ಜಿಲ್ಲೆಗಳ ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ.
5ನೇ ತರಗತಿಯಿಂದ ಪಿಯುಸಿ - 2ನೇ ವರ್ಷದವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ವಸತಿ ನಿಲಯದಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಧಾರವಾಡ ನಗರದ ಶಾಲಾ-ಕಾಲೇಜುಗಳಲ್ಲಿಯೇ ಪ್ರವೇಶ ಪಡೆದಿರಬೇಕು.
ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್, ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ (ದೂ.0836-2440176) ಇಲ್ಲಿಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್