
ಬೆಂಗಳೂರು, 26 ಮಾರ್ಚ್ (ಹಿ.ಸ.):
ಆ್ಯಂಕರ್:
ಕೇರಳದ ನೆರೆ ಸಂತ್ರಸ್ತರಿಗೆ ನೆರವಾಗಿ ₹10 ಕೋಟಿ ಹೆಚ್ಚುವರಿ ಅನುದಾನ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ ರಾಜ್ಯ ಘಟಕವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿರುವ ಬಿಜೆಪಿ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, “ರಾಜ್ಯದಲ್ಲಿ ವಿವಿಧ ವರ್ಗಗಳ ಸಮಸ್ಯೆಗಳಿಗೆ ಪರಿಹಾರ ನೀಡಲು ಹಣ ಇಲ್ಲದ ಸರ್ಕಾರ, ಅನ್ಯ ರಾಜ್ಯಕ್ಕೆ ಕೋಟ್ಯಂತರ ರೂ. ನೀಡುತ್ತಿದೆ” ಎಂದು ಆರೋಪಿಸಿದೆ.
ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸಮರ್ಪಕ ಪರಿಹಾರವಿಲ್ಲ, ಗ್ರಂಥಪಾಲಕರಿಗೆ ಸಮರ್ಪಕ ಸಂಬಳ ನೀಡಿಲ್ಲ, ಅತಿಥಿ ಶಿಕ್ಷಕರಿಗೆ ಐದು ತಿಂಗಳಿಂದ ವೇತನ ಬಾಕಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಮರ್ಪಕ ವೇತನ ಇಲ್ಲ, ಆದರೆ ಗ್ಯಾರಂಟಿ ಸಮಿತಿಗಳ ಅಧ್ಯಕ್ಷ–ಉಪಾಧ್ಯಕ್ಷರಿಗೆ ಹೆಚ್ಚಿನ ಸಂಬಳ ನೀಡಲು ಹಣ ಇರುವ ಸರ್ಕಾರ, ಕನ್ನಡಿಗರ ಸಮಸ್ಯೆಗಳ ಕಡೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa