ಬಾಗಲಕೋಟೆ ಉಪಚುನಾವಣೆ: 9 ಅಭ್ಯರ್ಥಿಗಳು ಕಣದಲ್ಲಿ
ಬಾಗಲಕೋಟೆ, 26 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ–2026 ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ನಾಮಪತ್ರಗಳ ಪರಿಶೀಲನೆಯ ನಂತರ ಒಟ್ಟು ಒಂಬತ್ತು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದಾಗಿ ಚುನಾವಣಾ ಅಧಿಕಾರ
ಅಂತಿಮ ಪಟ್ಟಿ


ಬಾಗಲಕೋಟೆ, 26 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ–2026 ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ನಾಮಪತ್ರಗಳ ಪರಿಶೀಲನೆಯ ನಂತರ ಒಟ್ಟು ಒಂಬತ್ತು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದಾಗಿ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಪ್ರಮುಖ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳ ಜೊತೆಗೆ ಪಕ್ಷೇತರರು ಕೂಡ ಸ್ಪರ್ಧಿಸುತ್ತಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಹಾಗೂ ಅವರು ಪ್ರತಿನಿಧಿಸುತ್ತಿರುವ ಪಕ್ಷಗಳು ಹೀಗಿವೆ:

ಉಮೇಶ್ ಹುಲ್ಲಪ್ಪ ಮೇಟಿ – ಇಂಡಿಯನ್ ನ್ಯಾಷನಲ್ ಕಾಂಗ್ರೆಸ್

ಚರಂತಿಮಠ ವೀರಭದ್ರಯ್ಯ (ವೀರಣ್ಣ) – ಭಾರತೀಯ ಜನತಾ ಪಾರ್ಟಿ

ಅಂತೋನಿಯ ಸೆವಾಸೆ – ಉತ್ತರಮ್ ಪ್ರಜಾಕೀಯ ಪಾರ್ಟಿ

ತೇಜೇಂದ್ರಮೂರ್ತಿ ದೇವಾಂಗ – ಜನತಾ ಚಳವಳಿ ಭಾರತ ಪಕ್ಷ

ನಾಗರಾಜ್ ಎಸ್. ಕಲಬುರ್ಗಿ – ಕರ್ನಾಟಕ ರಾಷ್ಟ್ರ ಸಮಿತಿ (ಪಕ್ಷ)

ತಳವಾರ ಶಿವಕುಮಾರ – ಬ್ಲೂ ಇಂಡಿಯಾ ಪಾರ್ಟಿ

ಸಿದ್ದಪ್ಪ ಗೋಡಿ – ಆಲ್ ಇಂಡಿಯಾ ಜನರಕ್ಷಾ ಪಾರ್ಟಿ

ಆನಂದ ಜಕಾತಿ – ಪಕ್ಷೇತರ

ರವಿಶಿವಪ್ಪ ಪಡಲಗಿ – ಪಕ್ಷೇತರ

ಈ ಅಭ್ಯರ್ಥಿಗಳು ತಮ್ಮ ತಮ್ಮ ಪಕ್ಷಗಳ ಚಿಹ್ನೆಗಳಲ್ಲಿ ಹಾಗೂ ಪಕ್ಷೇತರರು ಸ್ವತಂತ್ರ ಚಿಹ್ನೆಗಳಲ್ಲಿ ಚುನಾವಣೆಯನ್ನು ಎದುರಿಸಲಿದ್ದಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ವಿವಿಧ ಪಕ್ಷಗಳ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ.

ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಮತದಾನ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande