ಬಾಗಲಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ
ಬಾಗಲಕೋಟೆ, 26 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಗುರುವಾರ ನಗರದಲ್ಲಿ ಪಾದಯಾತ್ರೆ ನಡೆಸಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ನಗರದ ಗಜಾನನ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆ ಸಾಗರ ಬಂಡಿಯವರ 5ನ
ಚರಂತಿಮಠ


ಬಾಗಲಕೋಟೆ, 26 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಗುರುವಾರ ನಗರದಲ್ಲಿ ಪಾದಯಾತ್ರೆ ನಡೆಸಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ನಗರದ ಗಜಾನನ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆ ಸಾಗರ ಬಂಡಿಯವರ 5ನೇ ವಾರ್ಡ್ ಹಾಗೂ ಶಶಿಕಲಾ ಮಜ್ಜಗಿಯವರ 7ನೇ ವಾರ್ಡ್ ವ್ಯಾಪ್ತಿಯ ಜೈನಪೇಟೆ, ಬಾದೋಡಗಿ ಛಾಳ, ನಾರಾ ಸಂದಿ, ಶಂಕಲಿಂಗ ಗುಡಿ ಮತ್ತು ಕುಂಬಾರ ಮಡುವು ಪ್ರದೇಶಗಳಲ್ಲಿ ಸಾಗಿತು.

ಈ ವೇಳೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸಾರ್ವಜನಿಕರನ್ನು ಭೇಟಿ ಮಾಡಿ ಬೆಂಬಲ ಕೋರಿದರು. ಜನರೊಂದಿಗೆ ನೇರವಾಗಿ ಸಂವಾದ ನಡೆಸಿ ಪಕ್ಷದ ಪರವಾಗಿ ಮತ ನೀಡುವಂತೆ ಮನವಿ ಮಾಡಿದರು.

ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪಕ್ಷದ ಪರವಾಗಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಚರಂತಿಮಠ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande