ಕಾಂಗ್ರೆಸ್ ಅಭ್ಯರ್ಥಿ ಪರ ಮಲ್ಲಿಕಾರ್ಜುನ ಚರಂತಿಮಠ ಪ್ರಚಾರ
ಬಾಗಲಕೋಟೆ, 26 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಕಾಂಗ್ರೆಸ್ ಮುಖಂಡ, ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಗುರುವಾರ ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ನಗರದ ವಿವಿಧ ವಾರ್ಡ್ಗಳಲ್ಲಿ
ಮಲ್ಲಿಕಾರ್ಜುನ


ಬಾಗಲಕೋಟೆ, 26 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಕಾಂಗ್ರೆಸ್ ಮುಖಂಡ, ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಗುರುವಾರ ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ನಗರದ ವಿವಿಧ ವಾರ್ಡ್ಗಳಲ್ಲಿ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ವೇಳೆ ಸಾರ್ವಜನಿಕರನ್ನು ಭೇಟಿ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande