ಬಾಗಲಕೋಟೆ ಉಪಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ — ವಿವಿಧ ತಪಾಸಣಾ ಕೇಂದ್ರಗಳಲ್ಲಿ ನಗದು ಜಪ್ತಿ
ಬಾಗಲಕೋಟೆ, 26 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯಡಿಯಲ್ಲಿ ವಿವಿಧ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆ ವೇಳೆ ಲಕ್ಷಾಂತರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಚೆಕ್ಪೋಸ್ಟ್ನಲ್ಲಿ ಬು
ಚೆಕ್


ಬಾಗಲಕೋಟೆ, 26 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯಡಿಯಲ್ಲಿ ವಿವಿಧ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆ ವೇಳೆ ಲಕ್ಷಾಂತರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಚೆಕ್ಪೋಸ್ಟ್ನಲ್ಲಿ ಬುಧವಾರ ಸಂಜೆ ಕಾರಿನಲ್ಲಿ ಸಾಗಿಸುತ್ತಿದ್ದ ₹2.50 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಹುಬ್ಬಳ್ಳಿಯಿಂದ ಗೋಕಾಕ ತಾಲೂಕಿನ ಕೌಜಲಗಿ ಕಡೆಗೆ ತೆರಳುತ್ತಿದ್ದ ಕಾರನ್ನು ತಪಾಸಣೆ ನಡೆಸಿದ ವೇಳೆ ಹಣ ಪತ್ತೆಯಾಗಿದೆ.

ಎಸ್ಎಸ್ಟಿ ತಂಡದ ಅಧಿಕಾರಿ ಆರ್.ಎಲ್. ನಧಾಪ್ ನೇತೃತ್ವದಲ್ಲಿ ಹಾಗೂ ಎಫ್ಎಸ್ಟಿ ತಂಡದ ಅಧಿಕಾರಿ ರಮೇಶ್ ಮಾಡಬಾಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದಾಖಲೆಗಳನ್ನು ಒದಗಿಸದ ಹಿನ್ನೆಲೆ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ ಜಾಲಿಹಾಳ ಚೆಕ್ಪೋಸ್ಟ್ನಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ₹64 ಸಾವಿರ ಹಾಗೂ ₹75 ಸಾವಿರ ನಗದು ಜಪ್ತಿ ಮಾಡಲಾಗಿದೆ.

ಹಾಗೆಯೇ ಬಾಗಲಕೋಟೆ ತಾಲೂಕು ವ್ಯಾಪ್ತಿಯ ಟಕ್ಕಳಕಿ ಚೆಕ್ಪೋಸ್ಟ್ನಲ್ಲಿ ₹65 ಸಾವಿರ ನಗದು ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಲ್ಲಿರುವ ಹಿನ್ನೆಲೆ ಜಿಲ್ಲೆಯಲ್ಲಿ ವಾಹನಗಳ ತಪಾಸಣೆ ಮುಂದುವರಿದಿದ್ದು, ದಾಖಲೆಗಳಿಲ್ಲದೆ ಸಾಗಿಸುವ ಹಣದ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಾಗಲಕೋಟೆ ಜಿಲ್ಲೆ ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande